ಹಾಸನ: ಹಾಸನ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ಆಗಿರುವ ಭಾರಿ ಅವ್ಯವಹಾರದ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಆಗಿಲೆ ಯೋಗೇಶ್ ತಿಳಿಸಿದರು.ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ ಮನೆ ಒದಗಿಸುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಂದಷ್ಟು ಅನುದಾನ ನೀಡಿ ಮನೆ ನಿರ್ಮಾಣ ಮಾಡಿಕೊಡಲು ಸೂಚನೆ ನೀಡಿದರೆ ಹಾಸನ ಜಿಲ್ಲೆಯಲ್ಲಿ ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಕೋಟ್ಯಂತರ ರೂಪಾಯಿ ಹಣವನ್ನು ಲೂಟಿ ಮಾಡಿ ಬಡವರಿಗೆ ಸಿಗಬೇಕಾದ ಮನೆ ವಿಚಾರದಲ್ಲಿ ಅವ್ಯವಹಾರ ನಡೆದಿದೆ ಎಂದರು.