ಕಳಪೆ ಬಿತ್ತನೆ ಬೀಜ ಮಾರಾಟ ಮಾಡಿದ ಆರೋಪಿಗಳ ವಿರುದ್ಧ ಇದುವರೆಗೂ ಯಾಕೆ ಚಾರ್ಜ್ ಶೀಟ್ ಹಾಕಿಲ್ಲ ಎಂದು ಸಚಿವ ಶಿವಾನಂದ ಪಾಟೀಲ ಎಸ್ಪಿ ಯಶೋಧಾ ವಂಟಗೋಡಿ ಅವರನ್ನು ಖಾರವಾಗಿ ಪ್ರಶ್ನಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಅವರು ಪ್ರಶ್ನಿಸಿದರು. ಜಿಲ್ಲೆಯಲ್ಲಿ ಕಳಪೆ ಬೀಜ ಮಾರಾಟ ಮಾಡಿದ 4 ಅಂಗಡಿ ಸೀಜ್ ಮಾಡಿದೆ. ಆದರೂ ಯಾಕೆ ಚಾರ್ಜ್ ಶೀಟ್ ಹಾಕಿಲ್ಲ ಎಂದು ಗರಂ ಆದರು.