ಚಾಮರಾಜನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ವತಿಯಿಂದ ಹೆಚ್ಐವಿ ಏಡ್ಸ್ ತಡೆಗಟ್ಟಲು ಅಂಗವಾಗಿ ಮ್ಯಾರಥಾನ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಿಲ್ಲಾಧಿಕಾರಿ ಶಿಲ್ಪಾನಾಗ್, ಸಿಇಒ ಮೋನಾ ರೋತ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ ಹೆಚ್ಐವಿ ರೋಗಿಗಳನ್ನು ಕಳಂಕಿತರಾಗಿ ನೋಡುವ ಭಾವನೆಯನ್ನು ಬಿಡಬೇಕು ಎಂದರು