ಹತ್ತು ವರ್ಷಕ್ಕೊಮ್ಮೆ ಪ್ರತಿಯೊಬ್ಬ ಗ್ರಾಹಕರು ತಮ್ಮ ಖಾತೆಗಳಲ್ಲಿ ಕೆವೈಸಿ ಪುನರ್ಜೋಡನೆ ಮಾಡಬೇಕೆಂದು ಬೆಂಗಳೂರು ವಲಯ ಕಾರ್ಯಾಲಯದ ವಲಯ ಮುಖ್ಯಸ್ಥರಾದ ಕಲ್ಯಾಣ ವರ್ಮಾ ಅವರು ತಿಳಿಸಿದರು. ಸೋಮವಾರ ಕರ್ಲಹಳ್ಳಿಯ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ನಿರ್ದೇಶನದ ಮೇರೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಹಾಗೂ ಮಾಡಬಾಳ್ ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಆರ್ಥಿಕ ಸೇರ್ಪಡೆ ಪರಿಪೂರ್ಣತ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.