ಧರ್ಮಸ್ಥಳ ತನಿಖೆ ವಿಷಯದಲ್ಲಿ ಎಸ್ ಐಟಿ ವರದಿ ಬರುವ ಮುಂಚೆಯೇ ಷಡ್ಯಂತ್ರ ನಡೆದಿದೆ ಎಂದು ಉಪಮುಖ್ಯಮಂತ್ರಿ ಹೇಳಿಕೆ ನೀಡಿರುವುದರಿಂದ ತನಿಖೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸಂಜೆ 5 ಗಂಟೆಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣಗಳಲ್ಲಿ ಸತ್ಯ ಹೊರಬರಬೇಕೆಂದೆ, ಸರ್ಕಾರ ಎಸ್ ಐ ಟಿ ರಚನೆ ಮಾಡಿದೆ. ತನಿಖೆ ನಡೆಯುತ್ತಿದ್ದು, ವರದಿ ಬರುವ ಮುಂಚೆಯೇ ಬಿಜೆಪಿಗರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು ಬಿಜೆಪಿಗೆ ಒಂದು ಸಿದ್ದಾಂತ ಇರುವಂತೆ ಕಾಂಗ್ರೆಸ್ ಪಕ್ಷಕ್ಕೂ ಒಂದು ಸಿದ್ದಾಂತವಿದೆ. ಅದರಂತೆ ಪಕ್ಷ ಕೆಲಸ ಮಾಡುತ್ತದೆ.