ನಾಯಕನಹಟ್ಟಿ ಪಟ್ಟಣದ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಮಂಗಳವಾರ ಮಾರಮ್ಮನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ಬುಡಕಟ್ಟು ಸಂಸ್ಕೃತಿ ಪ್ರತೀಕವಾದ ಗೌರಸಮುದ್ರ ಮಾರಮ್ಮ ದೇವಿ ಜಾತ್ರೆಯ ನಂತರ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಭಾದ್ರಪದ ಮಾಸದ ಪ್ರತಿ ಮಂಗಳವಾರ ಮಾರಮ್ಮನ ಹಬ್ಬವನ್ನು ಆಚರಿಸಲಾಗುತ್ತದೆ. ಮಂಗಳವಾರ ನಾಯಕನಹಟ್ಟಿ ಪಟ್ಟಣದ ಕೋಟೆ ಬಡಾವಣೆಯಲ್ಲಿರುವ ಶ್ರೀ ದೊಡ್ಲು ಮಾರಿಕಾಂಬ ದೇವಾಲಯದಲ್ಲಿ ಸೋಮವಾರ ರಾತ್ರಿಯಿಂದಲೇ ದೇವರಿಗೆ ಹೂವಿನ ಅಲಂಕಾರ ಸೇರಿದಂತೆ ಹಲವು ಪೂಜಾ ಕಾರ್ಯಗಳು ನಡೆದವು.