ಜಿಲ್ಲೆಯ ನಾನಾ ದೇವಾಲಯಗಳಲ್ಲಿ ಭಕ್ತಾದಿಗಳಿಂದ ವಿಜೃಂಭಣೆಯಿಂದ ವಿಶೇಷ ಪೂಜಾ ಕಾರ್ಯಕ್ರಮ ಜರುಗಿದವು. ತಾಲೂಕಿನ ವೇಮಗಲ್ ಪಟ್ಟಣದಲ್ಲಿ ಶ್ರೀ ಶನಿಮಹಾತ್ಮ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ, ಅಲಂಕಾರಗಳನ್ನು ಮಾಡಲಾಗಿತ್ತು. ಪ್ರತಿ ಶ್ರಾವಣ ಶನಿವಾರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸುತ್ತಿದ್ದರು, ಕಡೆಯ ವಾರವಾದ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತಿ ಸದಸ್ಯೆ ದೀಪಾ ವಿನಯ್ ಕುಟುಂಬ ಹಾಗೂ ವಿಘ್ನೇಶ್ವರ ಯುವಕರ ಸಂಘದ ವತಿಯಿಂದ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಹಮ್ಮಿಕೊಂಡಿದ್ದರು. ಬೆಳಿಗ್ಗೆ ಯಿಂದ ನೂರಾರು ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದ ಸ್ವೀಕರಿಸಿದರು.