ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿ ಮೂರು ಬಾಲ್ಯ ವಿವಾಹಕ್ಕೆ ಸಿದ್ಧತೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಕ್ಕಳ ಸಹಾಯವಾಣಿ, ಪಿಡಿಒ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು, ಪೊಲೀಸ್ ಸಿಬ್ಬಂದಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಗ್ರಾಮಕ್ಕೆ ಭೇಟಿ ನೀಡಿ ಪೋಷಕರಿಗೆ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ತಿಳಿವಳಿಕೆ ನೀಡಿ ಮಕ್ಕಳ ಜೊತೆಗೆ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರಾಗುವಂತೆ ಸೂಚನೆ ನೀಡಿದರು