ಗಣಪತಿ ವಿಸರ್ಜನಾ ಮೆರವಣಿಗೆಗಳು ಪೂರ್ಣಗೊಳ್ಳುವವರೆಗೂ ಡಿಜೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಅವರು ತಿಳಿಸಿದ್ದಾರೆ. ಮಂಗಳವಾರ ಸಂಜೆ 7 ಗಂಟೆಗೆ ಈ ಕುರಿತು ದಾವಣಗೆರೆ ನಗರದಲ್ಲಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ದಾವಣಗೆರೆ ಜಿಲ್ಲೆಯಾದ್ಯಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಗಳು ಪೂರ್ಣಗೊಳ್ಳುವವರೆಗೆ ಸಾರ್ವಜನಿಕರ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಗೊಳಿಸಿ ಆದೇಶ ಹೊರಡಿಸಿದ್ದಾರೆ.