ಹನೂರು ತಾಲೂಕಿನ ಅಜ್ಜೀಪುರ ಸಮೀಪದ ಕಣಿವೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ತಡರಾತ್ರಿ ಕಳ್ಳರು ತಮ್ಮ ಕೈಚಳಕ ತೋರಿಸಿ ಹುಂಡಿ ಹಣವನ್ನು ದೋಚಿದ್ದು ಮಂಗಳವಾರ ಘಟನೆ ಬೆಳಕಿಗೆ ಬಂದಿದೆ. ಅಜ್ಜೀಪುರ ಕಣಿವೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಾಕಷ್ಟು ದಿನಗಳಿಂದ ಹುಂಡಿಯಲ್ಲಿ ಹಣ ಸಂಗ್ರಹ ಮಾಡಲಾಗಿತ್ತು, ಇದನ್ನು ನೋಡಿಕೊಂಡಿದ್ದ ಕಳ್ಳರು ತಮ್ಮ ಕೈ ಚಳಕ ತೋರಿ ಹುಂಡಿ ಒಡೆದು ಸುಮಾರು 50 ಸಾವಿರಕ್ಕೂ ಹೆಚ್ಚು ಹಣ ಕದ್ದು ಹೋಗಿದ್ದಾರೆ ಎಂಬ ಮಾಹಿತಿ ದೇವಾಲಯದ ಭಕ್ತರಿಂದ ತಿಳಿದು ಬಂದಿದೆ. ಸ್ಥಳಕ್ಕೆ ರಾಮಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.