ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ನಾಗರಾಳ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದೆ ಮಕ್ಕಳಿಗೆ ಅಗತ್ಯ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗುರುವಾರ ಮದನ ಅಂಗಮಾರಿ ಕೇಂದ್ರಕ್ಕೆ ಭೇಟಿ ನೀಡಿದ ಪೋಷಕರು ಬೇಸರ ವ್ಯಕ್ತಪಡಿಸಿ, ಅಂಗನವಾಡಿ ಕೇಂದ್ರದಲ್ಲಿ ಫ್ಯಾನ್ ಹಾಕಲಾಗಿದೆ ಆದರೆ ವಿದ್ಯುತ್ ಸಂಪರ್ಕ ಇಲ್ಲ, ಸಿಂಟೆಕ್ಸ್ ಅಳವಡಿಸಲಾಗಿದೆ ಆದರೆ ಕುಡಿಯಲು ನೀರು ಸಿಗುತ್ತಿಲ್ಲ, ಮಕ್ಕಳು ಇಂಥ ಒಂದು ಸ್ಥಿತಿಯಲ್ಲಿ ಕೂಡ ಬೇಕಾಗಿದೆ ಆದ್ದರಿಂದ ಕೂಡಲೇ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಂಗನವಾಡಿ ಕೇಂದ್ರಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.