ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಶರಣ ಪ್ರಕಾಶ ಪಾಟೀಲ್ ಅವರು ಅಕ್ಟೋಬರ್ ಒಂದರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜಿಲ್ಲೆಯಾದ್ಯಂತ ನೆರೆಹಾವಳಿಯಿಂದ ಬೆಳೆ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಜಿಲ್ಲೆಯ ಲಿಂಗಸುಗೂರ ಮಸ್ಕಿ ಸಿಂಧನೂರು ಮಾನ್ವಿ ಹಾಗೂ ರಾಯಚೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಹಾನಿಗೊಳಗಾದ ಪ್ರದೇಶಗಳ ಭೇಟಿ ನೀಡಿ ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.