ಭದ್ರಾವತಿ ತಾಲ್ಲೂಕಿನಲ್ಲಿ ಅಂತರಗಂಗೆ ಗ್ರಾಮದ ಜೆಡಿಎಸ್ ಮುಖಂಡರು ಇಂದು ಶಾಸಕ ಬಿ.ಕೆ. ಸಂಗಮೇಶ್ ಕಚೇರಿಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಶಾಸಕರ ಅಭಿವೃದ್ಧಿ ಹಾಗೂ ಪಕ್ಷದ ಸಿದ್ಧಾಂತವನ್ನು ಮೆಚ್ಚಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಇನ್ನು ಪಕ್ಷ ಸೇರ್ಪಡೆಯಾದವರಿಗೆ ಶಾಸಕರಾದ ಬಿ.ಕೆ. ಸಂಗಮೇಶ್ವರ ಪುತ್ರ ಬಿ.ಎಸ್. ಗಣೇಶ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಗರದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಲ್. ಷಡಕ್ಷರಿ ಸನ್ಮಾನಿಸಿದರು.