ಒಳಚರಂಡಿಯಲ್ಲಿ ಬಿದ್ದಿದ್ದ ಕರುವೊಂದನ್ನು ರಕ್ಷಣೆ ಮಾಡಿರುವ ಘಟನೆ ಶನಿವಾರ ಸಾಗರದಲ್ಲಿ ನಡೆದಿದೆ.ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಪದವಿ ಕಾಲೇಜು ಸಮೀಪದಲ್ಲಿ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು ಕೂಡಲೇ ಎಪಿಸಿ ಶಿವಾನಂದ್ ಹಾಗೂ ಎಎಸ್ಐ ಸುರೇಂದ್ರ ಕುಮಾರ್ ಅವರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.ಇನ್ನಾ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಹಾಯದೊಂದಿಗೆ ಕರುವನ್ನ ರಕ್ಷಣೆ ಮಾಡಿ ಹೊರತೆಗೆಲಾಗಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.