ಧರ್ಮಸ್ಥಳ ಶ್ರೀ ಕ್ಷೇತ್ರದ ಕುರಿತು ಸುಳ್ಳು ಅಪಪ್ರಚಾರ ಮಾಡುತ್ತಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕುವೆಂಪುನಗರ ಕಾಂಪ್ಲೆಕ್ಸ್ ಸಮೀಪ ಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮೈಸೂರು ನಗರದ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಪಪ್ರಚಾರ ಮಾಡುತ್ತಿರುವವರನ್ನು ಪತ್ತೆ ಮಾಡಬೇಕೆಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.