ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ತಮ್ಮ ಕಾರ್ಯದಿಂದಲೇ ಜನ ಮೆಚ್ಚುಗೆ ಪಡೆದ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ಜೊತೆ ಫೋಟೋ ತೆಗೆಸಿಕೊಳ್ಳಲು ಸಾರ್ವಜನಿಕರು ಮುಗಿಬಿದ್ದ ದೃಶ್ಯಗಳು ಕಂಡು ಬಂದವು. ಹುಬ್ಬಳ್ಳಿ ಧಾರವಾಡ ಅವಳಿ ನಗರಕ್ಕೆ ಪೊಲೀಸ್ ಕಮಿಷನರ್ ಆಗಿ ಬಂದ ಎನ್ ಶಶಿಕುಮಾರ್ ಅವರು. ಹತ್ತಾರು ಒಳ್ಳೆಯ ಕಾರ್ಯವನ್ನು ಮಾಡಿ ಸಾರ್ವಜನಿಕರ ಮೆಚ್ಚುಗೆ ಪಡೆದಿದ್ದು. ಇಂದು ಗಣೇಶ್ ಪೇಟೆಗೆ ಆಗಮಿಸಿದ ವೇಳೆ ಸಾರ್ವಜನಿಕರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರ ಜೊತೆ ಫೋಟೋ ತೆಗೆಸಿಕೊಂಡು ಸಂತಸಗೊಂಡರು.