ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದ ಬಗ್ಯೆ ಮಾಧ್ಯಮಗಳಲ್ಲಿ ನಿರಂತರ ಪ್ರಕಟವಾಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿಗಳಿಂದ ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಭಕ್ತಾದಿಗಳಿಗೆ ತೀವ್ರ ನೋವಾಗಿದೆ. ಭಯ ಮತ್ತು ಗೊಂದಲದ ವಾತಾವರಣ ಉಂಟಾಗಿದೆ. ಆದುದರಿಂದ ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯ ಒದಗಿಸಲು ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು. ಅವರು ಭಾನುವಾರ ತಮ್ಮ ಸಾವಿರಾರು ಅಭಿಮಾನಿಗಳೊಂದಿಗೆ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮಸ್ಥಳ ಸತ್ಯ ಯಾತ್ರೆ ಮಾತನಾಡಿದರು.