ಜಲ್ ಜೀವನ್ ಮಿಷನ್ ಯೋಜನೆಯಡಿ ಸ್ವಂತ ಕಟ್ಟಡದಲ್ಲಿ ನಡೆಯುತ್ತಿರುವ ಅಥವಾ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಯಾವುದೇ ಅಂಗನವಾಡಿ ಕಟ್ಟಡಗಳಿಗೆ, ಸರ್ಕಾರಿ ಶಾಲಾ ಕಾಲೇಜುಗಳಿಗೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಗ್ರಾಮಾಂತರ ಪ್ರದೇಶದಲ್ಲಿ ನಳ ಸಂಪರ್ಕ ವ್ಯವಸ್ಥೆ ಕಲ್ಪಿಸಿ ನೀರು ಸರಬರಾಜು ಮಾಡಲು ಅವಕಾಶವಿದೆ. ಈ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಒಂದೇ ದಿನದಲ್ಲಿ ಮಾಹಿತಿ ನೀಡಬೇಕು. ಈ ಕುರಿತು ಈಗಾಗಲೇ ಹಿಂದಿನ ಸಭೆಯಲ್ಲಿ ತಿಳಿಸಲಾಗಿತ್ತು. ಈ ವರೆಗೆ ಮಾಹಿತಿ ನೀಡಿರುವುದಿಲ್ಲ. ಆದ್ದರಿಂದ ನಿರ್ಲಕ್ಷ್ಯ ತೋರದೆ ಮಾಹಿತಿ ನೀಡುವಂತೆ ಎಚ್ಚರಿಕೆ ನೀಡಿದರು.