ಒತ್ತಡಕ್ಕೆ ಮಣಿದು ಡಿಜೆ ನಿಷೇಧವನ್ನು ಹಿಂಪಡೆಯಬಾರದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿಗೆ ಹಿಮಾಲಯನ್ ಅಡ್ವೆಂಚರ್ ಅಂಡ್ ನೇಚರ್ ಅಕಾಡೆಮಿ ದಾವಣಗೆರೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸಂಜೆ 5 ಗಂಟೆಗೆ ವತಿಯಿಂದ ಮನವಿ ಸಲ್ಲಿಸಿದ್ದಾರೆ. ಗಣೇಶೋತ್ಸವ ಹಾಗೂ ಈದ್ ಮಿಲಾದ್ ಆಚರಣೆಗಳಿಗೆ ಜಿಲ್ಲಾಧಿಕಾರಿಗಳು ಡಿ.ಜೆ. ನಿಷೇಧ ಮಾಡಿರೋದು ಹಿರಿಯ ನಾಗರಿಕರಿಗೆ, ಸಾರ್ವಜನಿಕರಿಗೆ, ಸಂತಸ ತಂದಿದೆ. ಆದ್ದರಿಂದ ಡಿ.ಜೆ. ಇಲ್ಲದೆ ಜಾನಪದ ಕಲಾತಂಡಗಳ ಮೂಲಕ ಗಣೇಶ ವಿಸರ್ಜನೆ ಶಾಂತಿಯುತವಾಗಿ ನಡೆಯುತ್ತಿದೆ ಎಂದಿದ್ದಾರೆ.