ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.60 ಲಕ್ಷ ಕ್ಯೂಸೆಕ್ ನೀರು ಬಿಟ್ಟಿದ್ದರಿಂದ ಬಾರಿ ಪ್ರಮಾಣದಲ್ಲಿ ತುಂಬಿ ಹರಿಯಲಾರಂಭಿಸಿದ್ದು, ಇದರಿಂದ ಯಾದಗಿರಿ ರಾಯಚೂರು ಜಿಲ್ಲೆಗಳ ಸಂಪರ್ಕ ಕಲ್ಪಿಸುವ ಕೊಳ್ಳೂರ ಗ್ರಾಮದ ಬಳಿಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ಗುರುವಾರ ಸಂಜೆ ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ಈ ಸ್ಥಳಕ್ಕೆ ಭೇಟಿ ನೀಡಿ, ಪ್ರತಿ ವರ್ಷ ಮಳೆಗಾಲ ಬಂದರೆ ಈ ಸೇತುವೆ ಸಂಚಾರ ಬಂದ್ ಆಗುತ್ತದೆ, ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗುತ್ತದೆ. ಆದ್ದರಿಂದ ಸರಕಾರ ಕೂಡಲೇ ಈ ಸೇತುವೆ ಎತ್ತರ ಹೆಚ್ಚಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.