ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಅವರನ್ನ ಅಮಾನತು ಮಾಡಿರುವ ರಾಜ್ಯ ಸರ್ಕಾರದ ವಿರುದ್ದ ರಾಜ್ಯಪಾಲರು ಶಿಸ್ತು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಜಿಲ್ಲಾ ನಾಯಕ ಸಮಾಜದ ಒಕ್ಕೂಟವತಿಯಿಂದ ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಸೋಮವಾರ ಮಧ್ಯಾಹ್ನ 12.15 ರ ಸಮಯದಲ್ಲಿ ನಗರದ ಟೌನ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರಿಗೆ ಮೆರವಣಿಗೆ ನಡೆಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ವಿರುದ್ಧ ಘೋಷಣೆ ಕೂಗಲಾಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ಪ್ರತಿಭನೆಕಾರರು ಸರ್ಕಾರದ ವಿರುದ್ದ ಪ್ರತಿಭಟಿಸಿದರು.