ಶಹಾಪುರ ವಸತಿ ನಿಲಯದ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘಟನೆ ವತಿಯಿಂದ ಸುರಪುರ ಉಪ ವಿಭಾಗದ ಡಿವೈಎಸ್ಪಿ ಅವರಿಗೆ ಮನವಿ ಸಲ್ಲಿಸಿದರು. ಶಹಾಪುರ ನಗರದ ವಸತಿ ನಿಲಯದಲ್ಲಿ 9ನೇ ತರಗತಿ ಬಾಲಕಿ, ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಗುರುಗಳು ಮತ್ತು ವಸತಿ ನಿಲಯದ ಮೇಲ್ವಿಚಾರಕರ ಹಾಗೂ ಪ್ರಕರಣದಲ್ಲಿ ಆರೋಪಿತನಾಗಿರುವ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷ ಭೀಮನಗೌಡ ವಿ.ಲಕ್ಷ್ಮಿ ಆಗ್ರಹಿಸಿದ