ಕಲಬುರಗಿ : ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳಮೀಸಲಾತಿ ಜಾರಿಗೆ ತಂದಿದ್ದು ಸ್ವಾಗತಾರ್ಹ ವಿಚಾರ.. ಆದರೆ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯವನ್ನ ಸಂಪೂರ್ಣ ಕಡೆಗಣಿಸಲಾಗಿದೆ ಅಂತಾ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮಾವಾದ ಸಂಘಟನೆ ರಾಜ್ಯಾಧ್ಯಕ್ಷ ಡಾ ಮೋಹನರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಸೆ5 ರಂದು ಬೆಳಗ್ಗೆ 11 ಗಂಟೆಗೆ ಕಲಬುರಗಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳಲ್ಲಿ ಅತ್ಯಂತ ಹಿಂದುಳಿದ ಅಲೆಮಾರಿ ಸಮುದಾಯಗಳಿಗೆ ಶೇ 1 ರಷ್ಟು ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ಡಾ ಮೋಹನರಾಜ್ ಆಗ್ರಹಿಸಿದ್ದಾರೆ.