ವಿಜಯಪುರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಜಿಲ್ಲಾಧಿಕಾರಿ ಆನಂದ್ ಕೆ ಅವರಿಗೆ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಮನವಿ ಸಲ್ಲಿಸಿದರು. ಜಿಲ್ಲೆಯ ರೈತರೊಂದಿಗೆ ಅನುಚಿತ ವರ್ತನೆ ತೋರುತ್ತಿರುವ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಅಗ್ರಹಿಸಿದರು. ಒಂದು ವೇಳೆ ಕ್ರಮ ತೆಗೆದುಕೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.