ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಸ್ಥಳಗಳಿಗೆ ಬಾಗಲಕೋಟ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಅಗಸ್ಟ ೨೪ ಮಧ್ಯಾಹ್ನ ೩ ಗಂಟೆಗೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು. ಈ ಸಮಯದಲ್ಲಿ ಡಿವಾಯ್‌ಎಸ್‌ಪಿ ವಿಶ್ವನಾಥರಾವ್ ಕುಲಕರ್ಣಿ, ಸಿಪಿಐ ಸುನೀಲ ಸವದಿ, ಪಿಎಸ್‌ಐ ಮಂಜುನಾಥ ಪಾಟೀಲ ಇದ್ದರು.