ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ತುರುವಿಹಾಳ ಗ್ರಾಮದ ಪೊಲೀಸ್ ಠಾಣೆಯ ಆವರಣದಲ್ಲಿ ಶನಿವಾರ ಬೆಳಗ್ಗೆ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ರೌಡಿಶೀಟರ್ ಗಳ ಪರೇಡ್ ನಡೆಸಲಾಗಿದೆ. ಈ ಸಂದರ್ಭದಲ್ಲಿ ಪಿಎಸ್ಐ ಸುಜಾತ ನಾಯಕ ಅವರು ಎಲ್ಲಾ ರೌಡಿಶೀಟರ್ ಗಳಿಗೆ ಖಡಕ್ ಎಚ್ಚರಿಕೆ ನೀಡಿ, ಮುಂಬರುವ ದಿನಗಳಲ್ಲಿ ನಡೆಯುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಶಾಂತಿಗೆ ಭಂಗ ಉಂಟು ಮಾಡಿದ್ದಲ್ಲಿ ನಿಮ್ಮ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದ್ದಾರೆ.