ಸೆಪ್ಟಂಬರ್ ೦೩ ಮಧ್ಯಾಹ್ನ ೩ ಗಂಟೆಯ ಸಂದರ್ಭ ಬೆಂಗಳೂರಿನ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-೩ರ ಅನುಷ್ಠಾನಕ್ಕೆ ಸಂಬAಧಿಸಿದAತೆ ಭೂಸ್ವಾಧೀನ, ಪುನರ್ವಸತಿ, ಪುನರ್‌ನಿರ್ಮಾಣ, ಭೂಪರಿಹಾರ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಹೆಚ್ಚುವರಿ ಭೂ ಪರಿಹಾರ ಕೋರಿ ದಾಖಲಿಸಿರುವ ಪ್ರಕರಣಗಳ ಕುರಿತು ನಡೆಸಿದ ಸಭೆಯಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕÀ ವಿಜಯಾನಂದ ಕಾಶಪ್ಪನವರ ಅವರು ಪಾಲ್ಗೊಂಡು ಮಾತನಾಡಿದರು.