ತಾಲ್ಲೂಕಿನ ಗಂಜಿಗುಂಟೆಯಲ್ಲಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ವಿಡಿಯೋ ಬುಧವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ವಿಡಿಯೋವನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಗಂಜಿಗುಂಟೆಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.