ಈದ್ ಮಿಲಾದ್ ಮತ್ತು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಸೆ.5 ಮತ್ತು 6 ರಂದು ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆ ನಿರ್ಬಂಧಿಸಲಾಗಿದೆ. ಈ ಎರಡೂ ದಿನಗಳಲ್ಲಿ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಈ ಕೆಳಕಂಡ ರಸ್ತೆ/ಮಾರ್ಗಗಳಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗವನ್ನು ಕಲ್ಪಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ ಸೆ.5 ರಂದು ಈದ್ ಅಂಗವಾಗಿ ಹನುಮಂತಪ್ಪ ಸರ್ಕಲ್ ನಿಂದ ಪೋಸ್ಟ್ ಆಫೀಸ್ ಸರ್ಕಲ್ ವರೆಗೆ, ಎಂ.ಜಿ.ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರ ಮತ್ತು ನಿಲುಗಡೆ ಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಾಯ್ಡು ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ಮತ್ತು ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ.