ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಸಲು ಶ್ರಮಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಸೋಮವಾರ ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ಆಯೋಜಿಸಿದ್ದ ಸಂತ ಮೇರಿ ಮಾತೆಯ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ದಯೆಯಿಲ್ಲದ ಧರ್ಮ ಯಾವುದಯ್ಯ-ದಯೆಯೇ ಧರ್ಮದ ಮೂಲವಯ್ಯ ಎನ್ನುವ ಬಸವಣ್ಣರ ಮಾತನ್ನು ಸ್ಮರಿಸಿದರು.