ಗ್ರಾ.ಪಂ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿ ಎಂದು ಗ್ರಾ.ಪಂ ನೌಕರರ ಸಂಘ ರಾಜ್ಯ ಸಮಿತಿ ಅಧ್ಯಕ್ಷ ಎಂ.ಬಿ.ನಾಡಗೌಡ ಹೇಳಿದರು. ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದ 7ನೇ ಜಿಲ್ಲಾ ಸಮ್ಮೇಳನ ನಡೆಯಿತು. ಈ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಸರ್ಕಾರದ ಎಲ್ಲ ಯೋಜನೆಗಳನ್ನು ಹಳ್ಳಿಯ ಜನರ ಮನೆ ಬಾಗಿಲಿಗೆ ತಲುಪಿಸಲು ಪ್ರಾಮಾಣಿಕವಾಗಿ ಶ್ರಮಿಸುವ ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಗ್ರಾ.ಪಂ ನೌಕರರ ಸಂಘ ರಾಜ್ಯ ಸಮಿತಿ ಅಧ್ಯಕ್ಷ ಎಂ.ಬಿ.ನಾಡಗೌಡ ಹೇಳಿದರು