ಹಳಿಯಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ನಡೆಯುತ್ತಿರುವ ಅಪಪ್ರಚಾರ ಮತ್ತು ಷಡ್ಯಂತ್ರದ ವಿರುದ್ಧ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹಂಚಿಕೊಳ್ಳುತ್ತಿರುವುವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತವೃಂದ ಹಳಿಯಾಳ ಪಟ್ಟಣದಲ್ಲಿ ಪಟ್ಟಣದಲ್ಲಿ ಇಂದು ಗುರುವಾರ ಬೆಳಿಗ್ಗೆ 11:30 ಗಂಟೆ ಸುಮಾರಿಗೆ ಪ್ರತಿಭಟನೆ ನಡೆಸಿದರು. ಪಟ್ಟಣದ ಗಣಪತಿ ದೇವಸ್ಥಾನದ ಬಳಿ ಜಮಾಯಿಸಿದ ಪ್ರತಿಭಟನಕಾರರು ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಆಕ್ರೋಶ ಹೊರಹಾಕಿದರು. 'ಜೈ ಧರ್ಮಸ್ಥಳ', 'ಧರ್ಮಸ್ಥಳದ ಜೊತೆಗೆ ನಾವಿದ್ದೇವೆ' ಎಂಬ ಭಿತ್ತಿಚಿತ್ರಗಳನ್ನು ಹಿಡಿದು ಮೆರವಣಿಗೆ ನಡೆಸಿದರು.