ಮೊಳಕಾಲ್ಮುರು:-ಶಾಸಕ ಎನ್ ವೈ ಗೋಪಾಲಕೃಷ್ಣ ಗುರುವಾರದಂದು ತಮ್ಮೆನಹಳ್ಳಿ ಗ್ರಾಪಂ ವ್ಯಾಪ್ತಿಯ ಮುರುಡಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ನೆರೆವೇರಿಸಿದರು. ಮುಖ್ಯ ರಸ್ತೆಯಿಂದ ಮುರುಡಿ ಮಾರ್ಗವಾಗಿ ಶಿರೇಕೋಳ ಕರಡಿಹಳ್ಳಿವರೆಗೆ ರಸ್ತೆ ಅಭಿವೃದ್ಧಿಯ ರೂ. 1.50 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದರು. ಶಾಸಕರು ಭೇಟಿ ನೀಡಿದ ಸಂಧರ್ಭದಲ್ಲಿ ಗ್ರಾಮಸ್ಥರು ವಿವಿಧ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿದರು.