ಶಿಕ್ಷಕರ ಬಗ್ಗೆ ಸರಕಾರಕ್ಕೆ ಗೌರವ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ನಗರದಲ್ಲಿ ಮಂಗಳವಾರ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಚಿವ ಸಂಪುಟ ಸಭೆಗಳಲ್ಲಿ ಶಿಕ್ಷಣ ಕ್ಷೇತ್ರದ ವಿಷಯ ಬಂದಾಗ ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಮತ್ತು ರಾಜ್ಯ ಸರಕಾರ ಶಿಕ್ಷಕರ ಬಗ್ಗೆ ಕಾಳಜಿ ವಹಿಸುತ್ತದೆ ಮತ್ತು ಅವರ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸುತ್ತದೆ ಎಂದು ಹೇಳಿದರು