ಬನ್ನಂಜೆ ಶ್ರೀ ನಾರಾಯಣ ಗುರು ವೃತ್ತವನ್ನು ತೆರವು ಗೊಳಿಸಿದ ವ್ಯಕ್ತಿಗಳನ್ನು ತಕ್ಷಣ ಬಂಧಿಸಿ ಕ್ರಮಕೈಗೊಳ್ಳುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆಗ್ರಹ ಮಾಡಿದ್ದಾರೆ. ಬನ್ನಂಜೆ ನಾರಾಯಣ ಗುರು ಮಂದಿರದ ಬಳಿ ಹಲವು ವರ್ಷಗಳ ಹಿಂದೆ ಅಳವಡಿಸಿದ್ದ ವೃತ್ತವನ್ನು ಯಾವುದೇ ಮುನ್ಸೂಚನೆ ನೀಡದೇ ಏಕಾಏಕಿ ತೆರವು ಗೊಳಿಸಿರುವುದು ಅತ್ಯಂತ ಖಂಡನೀಯ ಎಂದರು.