ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಪುರಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ಹೈಡ್ರಾಮಾ ನಡೆದ ಘಟನೆ ಇಂದು ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ. ಮುಖ್ಯಮಂತ್ರಿ ನಗರೋತ್ಥಾನ ಯೋಜನೆಯಡಿಯಲ್ಲಿ ವಿತರಣೆ ಮಾಡಲಾಗಿದ್ದ ಹೊಲಿಗೆ ಯಂತ್ರ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಆಕ್ರೋಶ ಭುಗಿಲೆದ್ದಿದೆ. ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ ಎದುರಿನಲ್ಲೇ ಮಾತಿನ ಚಕಮಕಿ ಶುರುವಾಗಿದೆ. ಶಾಸಕರು ಹಾಗೂ ಪೊಲೀಸರ ಮುಂದೆಯೇ ಈ ಒಂದು ಘಟನೆ ನಡೆದಿದೆ.