ಭಾನುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ "ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ" ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಧಾರ್ಮಿಕ ಸುಧಾರಣೆಯ ಮೂಲಕ ಸಾಮಾಜಿಕ ಪರಿವರ್ತನೆಗೆ ಮುನ್ನುಡಿ ಬರೆದ ಬ್ರಹ್ಮಶ್ರೀ ಗುರುಗಳಿಗೆ ಸಿಎಂ ನಮಿಸಿದರು. ಆರ್ಯ ಈಡಿಗ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ಹಾಗೂ ನಾರಾಯಣ ಗುರು ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ರೇಣುಕಾನಂದ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ ಸೇರಿ ಹಲವರು ಉಪಸ್ಥಿತರಿದ್ದರು.