ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಐದು ಪಾಲಿಕೆಗಳ ರಚನೆ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 2ರಂದು ವಿಧಾನಸೌಧದಲ್ಲಿ ಸಭೆ ನಡೆಸಿದರು. ಸಂಜೆ 5 ಗಂಟೆಗೆ ನಡೆದ ಸಭೆಯಲ್ಲಿ ಪ್ರಾಧಿಕಾರದ ಕಾರ್ಯ ನಿರ್ವಹಣೆ, ಪಾಲಿಕೆಗಳ ಪುನರ್ ರಚನೆಯ ಕುರಿತು ಚರ್ಚಿಸಲಾಯಿತು.ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಡಾ ಮಹೇಶ್ವರರಾವ್, ಡಿಸಿಎಂ ಅವರ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.