ಹಾಸನ: ಪ್ರಧಾನ ಮಂತ್ರಿ ಅವಾಸ್ ಯೋಜನೆ(ಪಿಎಂಎವೈ)ಯಡಿ ಮನೆ ಹಂಚಿಕೆಯಲ್ಲಿ ಸಕಲೇಶಪುರ ತಾಲೂಕು ಸೇರಿದಂತೆ ಹಾಸನ ಜಿಲ್ಲೆಯ ವಿವಿಧೆಡೆ ನಡೆದಿರುವ ಅವ್ಯವಹಾರ ಖಂಡಿಸಿ, ತಪ್ಪಿತಸ್ಥರ ಮೇಲೆ ಶಿಸ್ತುಕ್ರಮಕ್ಕೆ ಆಗ್ರಹಿಸಿ ಸಕಲೇಶಪುರ ಬಿಜೆಪಿ ಮಂಡಲ ವತಿಯಿಂದ ಹಾಸನ ನಗರದ ಜಿಪಂ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಲಾಯಿತು.ಸ್ಥಳೀಯ ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಆರ್.ಸಿ.ರಸ್ತೆಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಜಿಲ್ಲಾ ಪಂಚಾಯಿತಿ ಕಚೇರಿ ಎದುರಿಗೆ ಆಗಮಿಸಿ ಕೆಲಕಾಲ ಧರಣಿ ನಡೆಸಿ ಘೋಷಣೆ ಕೂಗಿದರು.