ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣಕ್ಕೆ ಸಚಿವ ಸಂತೋಷ ಲಾಡ್ ಭೇಟಿ ನೀಡಿ, ಧಾರವಾಡ ಕೃಷಿ ಮೇಳದ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು. ಕೃಷಿ ವಿವಿ ಆವರಣದಲ್ಲಿ ಸೆಪ್ಟೆಂಬರ್ 13 ರಿಂದ 16ರ ವರೆಗೆ ಕೃಷಿ ಮೇಳ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳೊಂದಿಗೆ ಚರ್ಚಿಸಿ, ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಪಂ ಸಿಇಓ ಭುವನೇಶ ಪಾಟೀಲ ಸೇರಿದಂತೆ ಕೃಷಿ ವಿವಿ ಅಧಿಕಾರಿಗಳು ಇದ್ದರು.