ಕೊಳ್ಳೇಗಾಲ ತಾಲ್ಲೂಕಿನ ಚಿಲಕವಾಡಿ ಗ್ರಾಮದ ಬಳಿ ಗುರುವಾರ ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತನು ಟಗರಪುರ ಗ್ರಾಮದ ನಿವಾಸಿ ರೇಚಣ್ಣ (30) ಎಂದು ಗುರುತಿಸಲಾಗಿದೆ. ಈತ ಫೈನಾನ್ಸ್ ಕೆಲಸ ಮುಗಿಸಿ ತನ್ನ ಸ್ವಗ್ರಾಮದತ್ತ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಎದುರುಗಡೆಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದ ವಾಹನವನ್ನು ಪತ್ತೆಹಚ್ಚುವಲ್ಲಿ ಪೊಲೀಸರು ತನಿಖೆ ಆರಂಬಿಸಿದ್ದಾರೆ