ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಾಲಬಾವಿ ಗ್ರಾಮದಲ್ಲಿ ಕಳೆದ 10 ದಿನಗಳಿಂದ ಜನ ಕಾಣಿಸಿಕೊಂಡಿದ್ದ ಜ್ವರದ ಪ್ರಮಾಣ ಈಗ ಕಡಿಮೆಯಾಗಿದೆ ಎಂದು ಆರೋಗ್ಯ ಅಧಿಕಾರಿ ಡಾಕ್ಟರ್ ಅಂಬರೀಶ್ ಪಾಟೀಲ್ ತಿಳಿಸಿದ್ದಾರೆ. ಗ್ರಾಮದಲ್ಲಿ ವೈದ್ಯರು ಬಿಡು ಬಿಟ್ಟು ಎಲ್ಲರನ್ನೂ ತಪಾಸಣೆ ಮಾಡುತ್ತಿದ್ದಾರೆ. ಈಚೆ ನಾಳೆ ಆರೋಗ್ಯ ಕೇಂದ್ರದಲ್ಲಿ 24 ಜನರಿಗೆ ಹೊರರೋಗಿ ಚಿಕಿತ್ಸೆ ನೀಡಲಾಗಿದೆ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರ ತಂಡ ಮನೆ ಮನೆಗೆ ಭೇಟಿ ಮಾಡಿ ಸಮೀಕ್ಷೆ ನಡೆಸಿ ಮಾಹಿತಿ ಪಡೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.