Download Now Banner

This browser does not support the video element.

ಕಲಬುರಗಿ: ಚಿಂಚನಸೂರಿನಲ್ಲಿ ಭೂಕಂಪ: ಜನತೆ ಆತಂಕ ಪಡದಂತೆ ಸಚಿವ ಪ್ರಿಯಾಂಕ್ ಖರ್ಗೆ ಸಲಹೆ

Kalaburagi, Kalaburagi | Sep 11, 2025
ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಇಂದು ಬೆಳಗ್ಗೆ 8.17ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆಯ ಸಣ್ಣ ಪ್ರಮಾಣದ ಭೂಕಂಪ ದಾಖಲಾಗಿದೆ. ಇದರಿಂದ ಜನರಲ್ಲಿ ಆತಂಕ ಮೂಡಿದೆ. ಘಟನೆಯ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುವಾರ 4 ಗಂಟೆಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ‌. ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದೊಂದಿಗೆ ಸಂಪರ್ಕದಲ್ಲಿದ್ದು, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಯಾವುದೇ ರೀತಿಯ ಹಾನಿ ಸಂಭವಿಸಿಲ್ಲವೆಂದು ಸಚಿವರು ತಿಳಿಸಿದ್ದಾರೆ. ಗ್ರಾಮಸ್ಥರು ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ.
Read More News
T & CPrivacy PolicyContact Us