ಚಳ್ಳಕೆರೆ ನಗರದ ಎಚ್.ಪಿ.ಪಿ ಸಿ ಪದವಿ ಕಾಲೇಜು ಮುಂಭಾಗದಲ್ಲಿದ್ದ ಬೃಹತ್ ಗಾತ್ರದ ಮರಗಳಿಗೆ ಕೊಡಲಿ ಪೆಟ್ಟು ನೀಡಲಾಗಿದೆ. ಇದರಿಂದ ಬೃಹತ್ ಗಾತ್ರದ ಮರಗಳು ಧರೆಗುರುಳಿದೆ. ಕಾಲೇಜು ಕ್ಯಾಂಪಸ್ ನಲ್ಲಿ ಕಟ್ಟಡದ ಮುಂಭಾಗದಲ್ಲಿದ್ದ ಮರಗಳನ್ನ ಕಡಿದು ಹಾಕಲಾಗಿದೆ. ಮರಗಳ ಮಾರಣಹೋಮ ಮಾಡಿದ್ದಕ್ಕೆ ಪರಿಸರ ಪ್ರೇಮಿಗಳು ಬೃಹತ್ ಗಾತ್ರದ ಮರಗಳನ್ನ ಕಡಿದು ಹಾಕಿದವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಖಾ ಸುಮ್ಮನೆ ಅಭಿವೃದ್ಧಿ ಹೆಸರಲ್ಲಿ ಪರಿಸರಕ್ಕೆ ಕೊಡಲಿ ಪೆಟ್ಟು ಕೊಡುತ್ತಿರುವವರ ವಿರುದ್ದ ಸ್ಥಳೀಯರು ಕಿಡಿ ಕಾರಿದ್ದಾರೆ. ಅಲ್ಲದೆ ಬಹು ವರ್ಷಗಳಿಂದ ಇದೇ ಮೈದಾನದಲ್ಲಿ ಮರಗಳು ವಿಧ್ಯಾರ್ಥಿಗಳಿಗೆ ನೆರಳು ನೀಡುತ್ತಿದ್ದವು. ಆದರೆ ಇದೀಗ ಏಕಾಏಕಿ ಮರಗಳನ್ನ ಕಡಿದು ಹಾಕಿದ್ದು, ವಿಧ್ಯಾರ್ಥಿಗಳ ಆಕ್ರೋಶಕ್ಕೂ ಕಾರಣವಾಗಿದೆ.