ಕಳುವಾಗಿದ್ದ ಮೊಬೈಲ್ ಫೋನುಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಶ್ರೀನಿವಾಸಪುರ ಪೊಲೀಸರು ಶ್ರೀನಿವಾಸಪುರ ತಾಲೂಕು ವ್ಯಾಪ್ತಿಯಲ್ಲಿ ಕಳುವಾಗಿದ್ದ ಮೊಬೈಲ್ ಫೋನುಗಳನ್ನು ಸಿ ಇ ಐ ಆರ್ ಪೋರ್ಟಲ್ ಮೂಲಕ ಮೊಬೈಲ್ ಫೋನುಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಗುರುವಾರ ಸಂಜೆ 6:00 ಗಂಟೆಯಲ್ಲಿ ಹಸ್ತಾಂತರಿಸಲಾಯಿತು. ಸಾರ್ವಜನಿಕರು ಸಾರ್ವಜನಿಕ ಪ್ರದೇಶದಲ್ಲಿ ಸಂಚರಿಸುವಾಗ ತಮ್ಮ ವಸ್ತುಗಳ ಮೇಲೆ ನಿಗಾ ವಹಿಸಬೇಕು ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಇದೆ ವೇಳೆ ಪೊಲೀಸರು ತಿಳಿಸಿದ್ದಾರೆ