ಅರಸೀಕೆರೆ ತಾಲ್ಲೂಕಿನಲ್ಲಿ ಪಿ.ಎಮ್.ಎ.ವೈ ಯೋಜನೆ ಅಡಿಯಲ್ಲಿ ಮಂಜೂರಾಗಿರುವ ಮನೆಗಳ ವಿಚಾರದಲ್ಲಿ ಅಧಿಕಾರಿಗಳು ಅವ್ಯವಹಾರ ಮಾಡಿರುವುದು ನಿಜ. ಇದರಲ್ಲಿ ನನ್ನ ಪಾತ್ರ ಇಲ್ಲ ನನ್ನ ಪಾತ್ರ ಇದ್ದರೆ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ ಶಿವಲಿಂಗೇಗೌಡ ಹೇಳಿದ್ರು.ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಈ ಯೋಜನೆ ಅಡಿಯಲ್ಲಿ 103 ಜನ್ರಿಗೆ ಮನೆ ಮಂಜೂ ರಾಗಿದ್ದು 94 ಜನ ದಾಖಲಾತಿ ಸಲ್ಲಿಕೆ ಮಾಡಿದ್ದಾರೆ. ಆದರೆ ಪಿಡಿಒ ಹಾಗೂ ಇಓ ಶಾಮೀಲಾಗಿ ಈ ಮನೆಗಳಿಗೆ ಹಣ ಬಿಡುಗಡೆ ಮಾಡುವ ವಿಚಾರದಲ್ಲಿ ಹಗರಣ ಮಾಡಿ ಸುಮಾರು 40 ಲಕ್ಷಕ್ಕೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅವರ ಮೇಲೆ ಪ್ರಕರಣ ದಾಖಲಾಗಿದೆ