Download Now Banner

This browser does not support the video element.

ಜಗಳೂರು: ಧರ್ಮಸ್ಥಳ ಕ್ಷೇತ್ರಕ್ಕೆ ಅಪಪ್ರಚಾರ ಖಂಡಿಸಿ ಜಗಳೂರಲ್ಲಿ ಬಿಜೆಪಿ ಪ್ರತಿಭಟನೆ

Jagalur, Davanagere | Aug 25, 2025
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಜಗಳೂರು ಮಂಡಲದ ವತಿಯಿಂದ ಸೋಮವಾರ ಸಂಜೆ 5 ಗಂಟೆಗೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಜಗಳೂರು ಪಟ್ಟಣದ ಪ್ರವಾಸಿ ಮಂದಿರದಿAದ ಹಳೆ ಗಾಂಧಿ ವೃತ್ತ, ಹೊಸ ಬಸ್ ನಿಲ್ದಾಣ ಅಂಬೇಡ್ಕರ್ ವೃತ್ತ ಡಾ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ತಮ್ಮ ಬೇಡಿಕೆಯ ಪಟ್ಟಿಯನ್ನು ಸಲ್ಲಿಸಿದರು. ಈ ವೇಳೆ ಮಾಜಿ ಶಾಸಕ ಎಚ್. ಪಿ . ರಾಜೇಶ್ ಮಾತನಾಡಿ, ಧರ್ಮಸ್ಥಳ ಹಿಂದುಗಳಿಗೆ ಪ್ರಮುಖ ಹಾಗೂ ಪವಿತ್ರ ಶ್ರದ್ಧಾ ಕೇಂದ್ರವಾಗಿದ್ದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆತರುವ ಹುನ್ನಾರದಿಂದ ಕೆಲ ಕಿಡಿಗೇಡಿಗಳು ಹಾಗೂ ಎಡಚರರು ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
Read More News
T & CPrivacy PolicyContact Us