ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಹೋರ್ತಿ ಪೊಲೀಸ್ ಠಾಣಾ ಅಧಿಕಾರಿಗಳಿಂದ ಗುರುವಾರ ಸಾಯಂಕಾಲ 5ಗಂಟೆ ಸುಮಾರಿಗೆ ಗ್ರಾಮದ ಮುಖಂಡರೊಂದಿಗೆ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಶಾಂತಿ ಸಭೆ ನಡೆಸಿದರು. ಗಣೇಶ ಹಬ್ಬ ಹಾಗೂ ಮೊಹರಂ ಹಬ್ಬವನ್ನು ಗ್ರಾಮಸ್ಥರು ಅಚ್ಚುಕಟ್ಟಾಗಿ ಅರ್ಥಪೂರ್ಣವಾಗಿ ಶಾಂತಿಯುತವಾಗಿ ಆಚರಣೆ ಮಾಡಬೇಕು ಯಾವುದೇ ಅಹಿತಕರ ಘಟನೆ ಕಂಡು ಬಂದಲ್ಲಿ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.