ರಾಜ್ಯ ಕಾಂಗ್ರೆಸ್ ಸರ್ಕಾರ ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ಆರನೇ ಗ್ಯಾರಂಟಿ, ಗಣೇಶ ಹಬ್ಬಕ್ಕೆ ಡಿ.ಜೆ ಬ್ಯಾನ್ ಮಾಡಿದ್ದು ಏಳನೇ ಗ್ಯಾರಂಟಿ, ಎಂಟನೇ ಗ್ಯಾರಂಟಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜನರೇ ನೀಡಲಿದ್ದು, ಕಾಂಗ್ರೆಸ್ ಪಕ್ಷವನ್ನು ರಾಜ್ಯದಿಂದ ನಿರ್ನಾಮ ಮಾಡಲಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಹೇಳಿದರು. ದಾವಣಗೆರೆ ನಗರದಲ್ಲಿ ಗುರುವಾರ ಮಧ್ಯಾಹ್ಮ 1 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಸೆ.1ರಂದು ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಷಡ್ಯಂತ್ರಕ್ಕೆ ವಿದೇಶದಿಂದ ಹಣ ಬಂದಿರುವ ಅನುಮಾನ ಇದ್ದು, ಎನ್.ಐ.ಎಗೆ ಪ್ರಕರಣವನ್ನು ವಹಿಸಬೇಕು ಎಂದರು.