ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಗಳಿಗೆ ರಜೆಯನ್ನ ಘೋಷಣೆ ಮಾಡಲಾಗಿದೆ. ಮಲೆನಾಡು ಭಾಗದ ಶೃಂಗೇರಿ, ಎನ್.ಆರ್ ಪುರ, ಕೊಪ್ಪ, ಕಳಸ, ಮೂಡಿಗೆರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ನೀಡಿದ್ದು. ಚಿಕ್ಕಮಗಳೂರು ತಾಲೂಕಿನ ಕಸಬಾ ಅಂಬಳೆ, ಆವತಿ, ಜಾಗರ, ವಸ್ತಾರೆ, ಆಲ್ದೂರು ಖಾಂಡ್ಯ ಹೋಬಳಿ ವ್ಯಾಪ್ತಿ ಮತ್ತು ತರೀಕೆರೆ ತಾಲೂಕಿನ ಲಕ್ಕವಳ್ಳಿ, ಲಿಂಗದಳ್ಳಿ ಹೋಬಳಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಮಾಡಿದ್ದಾರೆ.